ಸುದ್ದಿ ಕಣಜ.ಕಾಂ | DISTRICT | BHADRA DAM
ಶಿವಮೊಗ್ಗ: ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಏಪ್ರಿಲ್ 28ರಂದು ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ ಬಿ.ಆರ್. ಪ್ರಾಜೆಕ್ಟ್ ಕರ್ನಸಟಕ ನೀರು ನಿಗಮ ನಿಯಮಿತ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾ ಜಲಾಶಯ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ 2021-22ರ ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲು 80ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯನ್ನು ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.