ಸುದ್ದಿ ಕಣಜ.ಕಾಂ | KARNATAKA | SPORTS
ಶಿವಮೊಗ್ಗ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಮಹಿಳಾ ಕ್ರಿಕೆಟ್ ಕ್ರೀಡಾಪಟು ಅದಿತಿ ರಾಜೇಶ್ ಆಯ್ಕೆಯಾಗಿದ್ದಾರೆ.
ಏಪ್ರಿಲ್18ರಿಂದ ಗುಜರಾತ್ ನ ರಾಜ್ಕೋಟ್ನಲ್ಲಿ ನಡೆಯಲಿರುವ ಹಿರಿಯ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ
ಅದಿತಿ ರಾಜೇಶ್ ಅವರು ಪ್ರಸ್ತುತ ನಗರದ ಡಿ.ವಿ.ಎಸ್ ವಿನೋಬನಗರ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಸಹ್ಯಾದ್ರಿ ಕಾಲೇಜಿನಲ್ಲಿರುವ ಕ್ರೀಡಾಂಗಣದಲ್ಲಿ ಕಳೆದ 8 ವರ್ಷಗಳಿಂದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ ಇವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿ ನಗರಕ್ಕೆ ಕೀರ್ತಿ ತಂದ ಈ ಪ್ರತಿಭಾವಂತ ಬಾಲಕಿಗೆ ಕೆ.ಎಸ್.ಸಿ.ಎ ಶಿವಮೊಗ್ಗ ವಲಯದ ಸಂಚಾಲಕ ಡಿ.ಎಸ್.ಅರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ, ಸಿಬ್ಬಂದಿ ವರ್ಗದವರು ಹಾಗೂ ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ್ದಾರೆ.