ರಾಜ್ಯ ರಾಜಕಾರಣ ನಾಯಕತ್ವ ಬದಲಾವಣೆ ಬಗ್ಗೆ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉತ್ತಮ ಕೆಲಸಗಳನ್ನು ಮಾಡುತಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಲಾಗುವುದಿಲ್ಲ ಎಂದು ಹೇಳಿದರು.

READ | ಮಹಿಳೆಯರೇ ಚಿನ್ನ ಪಾಲಿಶಿಂಗ್ ಮಾಡಿಸುವಾಗ ಎಚ್ಚರ!

ರಾಜ್ಯದಲ್ಲಿ 150 ಸೀಟ್ ಗೆಲ್ಲುವ ಗುರಿ
ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಈ ಕುರಿತು ಚರ್ಚಿಸುವುದಕ್ಕಾಗಿಯೇ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾನು ಕೂಡ ಅವರಿಗೆ ಭೇಟಿ‌ ನೀಡಲಿದ್ದೇನೆ ಎಂದು ತಿಳಿಸಿದರು.