ಶಿವಮೊಗ್ಗ ವಿವಿಧೆಡೆ ಇಂದು, ನಾಳೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 6ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ನರಸಿಂಹ ಬಡಾವಣೆ, ರಾಜಶೇಖರ್ ಪೆಟ್ರೋಲ್ ಬಂಕ್, 100 ಅಡಿ ರಸ್ತೆ, ಸವಿ ಬೇಕರಿ ಹಿಂಭಾಗ, ವಿಪ್ರ ಟ್ರಸ್ಟ್, ಬಾಲಾಜಿ ಗ್ರಾನೈಟ್, ಪೊಲೀಸ್ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ಶಿವಮೊಗ್ಗದ ಹಲವು ಪಂಚಾಯಿತಿಗಳಿಗೆ ಚುನಾವಣೆ ಫಿಕ್ಸ್, ಯಾವ್ಯಾವ ಗ್ರಾಮ ಪಂಚಾಯಿತಿಗಳಲ್ಲಿ ಎಲೆಕ್ಷನ್

ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ನಿರ್ವಹಣೆ ಕಾರ್ಯ ಹಾಗೂ ನಿರಂತರ ಜ್ಯೋತಿ ಕಾಮಗಾರಿಯ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 7 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರ ಸುತ್ತಮುತ್ತಲ ಹಳ್ಳಿಗಳು, ಆಯನೂರು, ಮಂಡಘಟ್ಟ, ಸಿರಿಗೆರೆ ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.