ಮತ್ತೆ ಮುನ್ನೆಲೆಗೆ ಬಂದ ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ವಿಚಾರ

ಸುದ್ದಿ ಕಣಜ.ಕಾಂ | CITY | SHIVAMOGGA AIRPORT
ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಇಡಬೇಕು ಎಂದು ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ಮನವಿ ಮಾಡಿದೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸೇನೆಯ ಕಾರ್ಯಕರ್ತರು, ಜಿಲ್ಲಾಡಳಿತದ ಊಲಕ ರಾಜ್ಯ ಸರ್ಕಾರಕ್ಕೆ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.

READ | ಪಿಎಸ್‍ಐ ನೇಮಕಾತಿ ಅವ್ಯವಹಾರ ವಿರುದ್ಧ ವಿನೂತನ ಪ್ರತಿಭಟನೆ

ಬೇಡಿಕೆಗಳೇನು?

  • ವಿಮಾನ ನಿಲ್ದಾಣದ ಆವರಣದಲ್ಲಿ ಅಂಬೇಡ್ಕರ್ ಅವರ 105 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಬೇಕು.
  • ರಾಜ್ಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹೆಸರಿನ ಬದಲಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೆಸರನ್ನು ನಮೂದಿಸಬೇಕು.
  • ಇಲಾಖೆಯ ಎಲ್ಲ ವಿದ್ಯಾರ್ಥಿ ನಿಲಯಗಳಿಗೆ ಅಂಬೇಡ್ಕರ್ ಹೆಸರಿಡಬೇಕು. ಎಲ್ಲ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಗಳಿಗೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಎಂದು ನಾಮಕರಣ ಮಾಡಬೇಕು.
  • ಭೋವಿ ಅಭಿವೃದ್ಧಿ ನಿಗಮಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭೋವಿ ಅಭಿವೃದ್ಧಿ ನಿಗಮ ಎಂದು ಹಾಗೂ ಇತರ ನಿಗಮಗಳಿಗೂ ಅಂಬೇಡ್ಕರ್ ಹೆಸರನ್ನು ಇಡಬೇಕು.

ಚಾಣಕ್ಯ ಸೇನೆಯ ಪ್ರಮುಖರಾದ ನಾರಾಯಣ ಐಹೊಳೆ, ಲೋಕೇಶ್, ಪ್ರಭು, ನಾಗರಾಜ್, ಜಯಲಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.