ಸುದ್ದಿ ಕಣಜ.ಕಾಂ | DISTRICT | DC NADE HALLI KADE
ಶಿವಮೊಗ್ಗ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮೇ 21ರಂದು ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಎಂಬ ಹೊಸ ಪರಿಕಲ್ಪನೆಯೊಂದಿಗೆ ಪ್ರತಿ ಮೂರನೇ ಶನಿವಾರದಂದು ಗ್ರಾಮ ಭೇಟಿ ನೀಡಿ ವಾಸ್ತವ್ಯ ಹೂಡುವ ಬಗೆಗಿನ ಸರ್ಕಾರದ ನಿರ್ದೇಶನದಂತೆ ಮೇ 21 ರಂದು ಬೆಳಗ್ಗೆ 11 ಗಂಟೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಯೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ, ಕುಂದುಕೊರತೆ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮಾಡುವರು.
ಈ ಭಾಗದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲು ಹಾಗೂ ಮೇ 21 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್. ಹೊನ್ನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.