ಸುದ್ದಿ ಕಣಜ.ಕಾಂ | DISTRICT | SCHOOL HOLIDAY
ಶಿವಮೊಗ್ಗ: ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 20ರಂದು ಉಪ ಚುನಾವಣೆ ನಡೆಯುತ್ತಿದ್ದು ಅಂದು ಉಪ ಚುನಾವಣೆಯ ಮತದಾನ ದಿನವೆಂದು ಘೋಷಿಸಲಾಗಿದೆ ಹಾಗೂ ಮತದಾನ ಕೇಂದ್ರವಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದ್ದಾರೆ.
ಯಾವ್ಯಾವ ಶಾಲೆಗಳಿಗೆ ರಜೆ?
ಚುನಾವಣಾ ಕ್ಷೇತ್ರಗಳಲ್ಲಿ ಮತದಾನ ಕೇಂದ್ರಗಳು ಬಹುತೇಕ ಶಾಲೆಗಳಾಗಿದ್ದು, ಮತದಾನ ಕೇಂದ್ರಗಳಲ್ಲಿ ಮೇ 20ರಂದು ಮತದಾನ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಜನದಟ್ಟಣೆಯಾಗಿ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನ ಮತಗಟ್ಟೆ ಸಂಖ್ಯೆ 174 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಳೇಕೊಪ್ಪ ಹಾಗೂ ಶಿಕಾರಿಪುರ ತಾಲ್ಲೂಕಿನ ಮತಗಟ್ಟೆ ಸಂಖ್ಯೆ 17 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೊಗ್ಗ ಈ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.