ಶಿವಮೊಗ್ಗದಲ್ಲಿ ಪ್ರವಾಹ ಹಿನ್ನೆಲೆ ಭೇಟಿ ನೀಡಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಸಹ ಘೋಷಿಸಲಾಗಿದೆ. ಮಳೆಯಿಂದಾಗಿ ಜನಜೀವನಕ್ಕೆ ತೊಂದರೆಯಾಗಿದ್ದು, ತುರ್ತಾಗಿ ಎಲ್ಲ ರೀತಿಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಮಳೆಯಿಂದ ತೊಂದರೆಗೀಡಾದ ಪ್ರದೇಶಗಳು ಮತ್ತು ಜನರಿಗೆ ತುರ್ತಾಗಿ ಪರಿಹಾರ ಕಾರ್ಯಗಳನ್ನು ಒದಗಿಸುವ ಸಲುವಾಗಿ ನಾನು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲ ರೀತಿಯ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚನೆಗಳನ್ನು ನೀಡಿದ್ದೇನೆ. ಅದರಂತೆ, ಪರಿಹಾರ ಕಾರ್ಯಗಳು ಈಗಾಗಲೇ ಪ್ರಾರಂಭಗೊಂಡಿವೆ.

READ | ಶಿವಮೊಗ್ಗದಲ್ಲಿ ಹಲವು ಮನೆಗಳಿಗೆ ಹಾನಿ, ಹೆಕ್ಟೇರ್ ಗಟ್ಟಲೇ ಕೃಷಿ ಭೂಮಿ ಜಲಾವೃತ

ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದೇನೆ
ಮಂಡ್ಯ ಜಿಲ್ಲೆಯಾದ್ಯಂತ ಹಾಗೂ ನನ್ನ ಮತಕ್ಷೇತ್ರವಾದ ಕೆ.ಆರ್.ಪೇಟೆಯಲ್ಲಿಯೂ ನಿರಂತರವಾಗಿ ಬೀಳುತ್ತಿದ್ದು, ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಇಂದು ನಾನು ಖುದ್ದು ಭೇಟಿ ನೀಡುತ್ತಿರುವುದರಿಂದ ಮೇ 21ರಂದು ಜಿಲ್ಲೆಗೆ ಪ್ರವಾಸ ಕೈಗೊಂಡು 3 ದಿನ ಅಲ್ಲಿಯೇ ವಾಸ್ತವ್ಯ ಹೂಡಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಂಡಿರುವ ಎಲ್ಲ ಪರಿಹಾರ ಕಾರ್ಯಗಳನ್ನು ಪರಿಶೀಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು, ಉಪ-ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರ ಸಮನ್ವಯದೊಂದಿಗೆ ಪರಿಹಾರ ಕಾರ್ಯಗಳನ್ನು ಒದಗಿಸಲು ಸಹಾಯ ಮಾಡಲು ಅನುವಾಗುವಂತೆ ನನ್ನ ಕಚೇರಿಯಲ್ಲಿ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ಲೋಹಿತ್ ಇವರನ್ನು ಸಮನ್ವಯಾಧಿಕಾರಿಯಾಗಿ ನೇಮಿಸಲಾಗಿದೆ. ಇವರು ಈಗಾಗಲೇ ಕಾರ್ಯೋನ್ಮುಖರಾಗಿರುತ್ತಾರೆ.
ತೊಂದರೆಗೀಡಾಗಿರುವ ಜನರು ಪರಿಹಾರ ಕಾರ್ಯದ ನೆರವಿಗೆ ಡಿ.ಲೋಹಿತ್, ಸಮನ್ವಯಾಧಿಕಾರಿ, ಮೊಬೈಲ್ ಸಂ: 9535885336 ಇವರನ್ನು ಸಹ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಸ್ತುವಾರಿ ಸಚಿವ ನಾರಾಯಣಗೌಡ ಚೊಚ್ಚಲ ಗಣರಾಜ್ಯೋತ್ಸವದಲ್ಲಿ ಭಾಗಿ, ಶಿವಮೊಗ್ಗ ಅಭಿವೃದ್ಧಿಯ ಟಾಪ್ 5 ಪಾಯಿಂಟ್

Leave a Reply

Your email address will not be published.