10 ವಾರ್ಡ್ ಗಳಿಗೆ ನುಗ್ಗಿದ ನೀರು, ಅಪಾರ ಹಾನಿ, ನೆರೆ ಪೀಡಿತ ಸ್ಥಳಕ್ಕೆ ಸಂಸದರ ಭೇಟಿ

ಸುದ್ದಿ ಕಣಜ.ಕಾಂ | DISTRICT | RAIN FALL
ಶಿವಮೊಗ್ಗ: ನಗರದ ತಗ್ಗು ಪ್ರದೇಶಗಳಲ್ಲಿನ 8-10 ವಾರ್ಡ್’ಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು, ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ.
ಮನೆಗಳಲ್ಲಿನ ದಿನಸಿ, ಮತ್ತಿತರ ಸಾಮಗ್ರಿಗಳು ಹಾನಿಗೊಳಗಾಗಿವೆ. ಈಗಾಗಲೇ 7 ಮನೆಗಳು ಕುಸಿದಿರುವ ಮಾಹಿತಿ ಇದೆ. ಮತ್ತೆ ಕೆಲವು ಮನೆಗಳು ಕುಸಿಯುವ ಹಂತದಲ್ಲಿವೆ. ಇವುಗಳ ಸಮಗ್ರ ಮಾಹಿತಿ ಪಡೆದು, ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರು ಅಹವಾಲುಗಳನ್ನು ಸ್ವೀಕರಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಎದುರು ಗೊಳೋ ಎಂದು ಅತ್ತ ರೈತ (VIDEO REPORT)

ಶೀಘ್ರವೇ ಸಭೆ ಕರೆಯಲು ಸೂಚನೆ
ಜಿಲ್ಲೆಯಲ್ಲಿ ಕಳೆದೆರೆಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರ ಮತ್ತ ಗ್ರಾಮೀಣ ಪ್ರದೇಶಗಳಲ್ಲಿನ ನಿವಾಸಿಗಳಿಗೆ ತೀವ್ರತರಹದ ಹಾನಿಯುಂಟಾಗಿದ್ದು, ಹಲವು ವರ್ಷಗಳಿಂದ ಕಂಡುಬರುತ್ತಿರುವ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು ಎಂದು ರಾಘವೇಂದ್ರ ಹೇಳಿದರು.

READ | ಶಿವಮೊಗ್ಗದ ಜಲಾಶಯಗಳಲ್ಲಿರುವ ನೀರಿನ ಪ್ರಮಾಣವೆಷ್ಟು?

ಪ್ರಸಕ್ತ ಮಾಹೆಯಲ್ಲಿ ಕಳೆದ ಹಲವು ದಶಕಗಳ ಹಿಂದಿನ ಸರಾಸರಿ ಮಳೆಯನ್ನು ಗಮನಿಸಿದಾಗಿ ಸುಮಾರು ವಾಡಿಕೆ ಮಳೆಗಿಂತ 4 ಪಟ್ಟು ಹೆಚ್ಚಿನ ಮಳೆ ಒಂದೆರೆಡು ದಿನದಲ್ಲಿ ಆಗಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ಕೂಲಂಕಶವಾಗಿ ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗುವುದು ಎಂದರು.
9 ಆಯ್ದ ಸ್ಥಳಗಳಲ್ಲಿ ಕಾಳಜಿ ಕೇಂದ್ರ
ನಗರ ಪ್ರದೇಶದಲ್ಲಿನ ಸಂತ್ರಸ್ತರಿಗೆ 9 ಆಯ್ದ ಸ್ಥಳಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ತಾತ್ಕಾಲಿಕ ಅವಧಿಗೆ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಲ್ಲದೇ ಜಿಲ್ಲೆಯ ಕೆಲವು ತಾಲೂಕುಗಳಲ್ಲಿಯೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿರುವ ಮಾಹಿತಿ ಇದೆ. ಸಂಬಂಧಪಟ್ಟವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

READ | ಪ್ಲಾಸ್ಟಿಕ್ ಡಿಪ್ಲೋಮಾ ಮಾಡಿದರೆ 100% ಉದ್ಯೋಗ

ಯಾವ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ
ಮಳೆಯ ಪ್ರಮಾಣ ಕಡಿಮೆಯಾಗಿ ಸಹಜ ಸ್ಥಿತಿಗೆ ಮರಳುವವರೆಗೆ ಜಿಲ್ಲೆಯಲ್ಲಿನ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಜೆಯ ಮೇಲೆ ತೆರಳದಂತೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜನರ ಸಂಕಷ್ಟಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಜಗದೀಶ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಚಿದಾನಂದ್ ವಟಾರೆ ಹಲವರು ಉಪಸ್ಥಿತರಿದ್ದರು.

ಕುವೆಂಪು ವಿಶ್ವವಿದ್ಯಾಲಯಕ್ಕೆ‌ ನುಗ್ಗಿದ ಕಾಡಾನೆಗಳು ವಾಪಸ್

Leave a Reply

Your email address will not be published.