ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-8 ಫೀಡರ್ ನಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿಮೇ 25 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳೆಬೆನವಳ್ಳಿ, ದೊಡ್ಡ ತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸಳಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.