ಬೆಕ್ಕಿನಕಲ್ಮಠ, ಕೋಟೆ ರಸ್ತೆ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೇ 25 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್. ಶಿವಮೊಗ್ಗದಲ್ಲಿ ತುರ್ತಾಗಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ನಗರ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ.ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ಆರ್ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನಕೇರಿ, ನಾಗಪ್ಪನಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮೀರ್ ಅಹಮ್ಮದ್ ಸರ್ಕಲ್, ಶಿವಾಜಿರಸ್ತೆ, ತಿರುಪಳ್ಳಯ್ಯನ ಕೇರಿ, ಸಾವರ್ಕರ್ ನಗರ, ಅಶೋಕ ರಸ್ತೆ, ಕುಚಲಕ್ಕಿ ಕೇರಿ, ಎಂ.ಕೆ.ಕೆ.ರಸ್ತೆ, ಅನವೇರಪ್ಪನ ಕೇರಿ, ಎಲೆ ರೇವಣ್ಣನ ಕೇರಿ, ಗಂಗಾಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published.