ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕೆಳಗಿನ ತುಂಗಾನಗರ ಮಹಮ್ಮದ್ ತಬಾರಕ್ ವುಲ್ಲಾ(21) ಬಂಧಿತ. ಟಿಪ್ಪುನಗರದ ಕೆ.ಕೆ ಶೆಡ್ ಹತ್ತಿರದ ಖಾಲಿ ಸ್ಥಳದಲ್ಲಿ ತಾನು ಸಂಗ್ರಹಿಸಿ ಇಟ್ಟಿದ್ದ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗಾನಗರ ಪೊಲೀಸ್ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿಯ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.
₹35,000 ಮೌಲ್ಯದ ಒಟ್ಟು 910 ಗ್ರಾಂ ಒಣ ಗಾಂಜಾ ಮತ್ತು ₹200 ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.