ಜೆಎನ್‍ಎನ್‍ಸಿ ಹಳೆಯ ವಿದ್ಯಾರ್ಥಿಗಳ ಸಮ್ಮಿಲನದಲ್ಲಿ ಕನ್ನಡದಲ್ಲೇ ಮಾತನಾಡಿದ ಆಂಧ್ರ ಮಿನಿಸ್ಟರ್, ಶಿವಮೊಗ್ಗ ಬಗ್ಗೆ ಹೇಳಿದ್ದೇನು?

JNNCE

 

 

ಸುದ್ದಿ ಕಣಜ.ಕಾಂ | DISTRICT | EDUCATION CORNER 
ಶಿವಮೊಗ್ಗ: ನಗರದ ಜೆ.ಎನ್.ಎನ್.ಸಿ. ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶನಿವಾರ ‘ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ-ನೆನಪಿನ ಅಂಗಳ 2022’ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವ ಕಾಕನಿ ಗೋವರ್ಧನ ರೆಡ್ಡಿ, ಇಂದು ಬಂದು ನಾಳೆ ಹೋಗುವ ಅಧಿಕಾರಕ್ಕಿಂತ ನಾವು ರೂಢಿಸಿಕೊಂಡ ವ್ಯಕ್ತಿತ್ವವೇ ಬದುಕಿನಲ್ಲಿ ಎಂದೆಂದಿಗೂ ಶಾಶ್ವತ ಎಂದು ಹೇಳಿದರು.

READ | ಪಿಎಸ್‍ಐ ನೇಮಕಾತಿ ಹಗರಣ, ಪ್ರಿಯಾಂಕ್ ಖರ್ಗೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ಅದ್ಭುತ ಸ್ಪಂದನೆ ಕಲಿಸಿದ್ದು ಶಿಕ್ಷಣ ಸಂಸ್ಥೆ
ಒಬ್ಬ ವ್ಯಕ್ತಿಯ ಉನ್ನತ್ತೀಕರಣದಲ್ಲಿ ಶಿಕ್ಷಕರ ಹಾಗೂ ವಿದ್ಯಾ ಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಅಂತಹ ಅದ್ಭುತ ಸ್ಪಂದನೆ ಶಿಕ್ಷಕರು ಮತ್ತು ವಿದ್ಯಾಸಂಸ್ಥೆಯಿಂದ ದೊರೆತ್ತಿದ್ದರಿಂದಲೇ ಯಶಸ್ಸಿನ ಹಾದಿಯೆಡೆಗೆ ಸಾಗಲು ಸಾಧ್ಯವಾಯಿತು. ಇತರರ ಕೈ ಕೆಳಗೆ ಕೆಲಸ ಮಾಡಲು ಇಚ್ಚೆಯಾಗದೇ ಸಿವಿಲ್ ಕನ್ಸಲ್ಟೆಂಟ್ ಆಗಿ ಸ್ವಂತ ಉದ್ಯಮ ಪ್ರಾರಂಭಿಸಿದೆ. ಅನೇಕ ಸವಾಲುಗಳ ನಂತರ ಉತ್ತಮ ಉದ್ಯಮಿಯಾಗಿ ಹೊರಹೊಮ್ಮಿದೆ. ನಂತರ ರಾಜಶೇಖರ ರೆಡ್ಡಿ ಅವರ ನಾಯಕತ್ವದಲ್ಲಿ ಜಿಲ್ಲಾ ಪರಿಷತ್ತಿನ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದೆ. ಪ್ರಸ್ತುತ ಜಗನ್ ಮೋಹನ್ ರೆಡ್ಡಿ ಅವರ ಸಂಪುಟದ ಅತಿ ಸೂಕ್ಷ್ಮ ಇಲಾಖೆಯಾದ ಕೃಷಿ ಮತ್ತು ಸಹಕಾರ ಇಲಾಖೆಯ ಸಚಿವನಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆ ಎಂದರೇ ನನಗೆ ಭಾವನಾತ್ಮಕ ನಂಟು
ವಿದ್ಯಾಭ್ಯಾಸದ ಸಂದರ್ಭದಲ್ಲಿ ಇಲ್ಲಿ ಕಳೆದ ಅನೇಕ ಕ್ಷಣಗಳು ಅವಿಸ್ಮರಣೀಯ. ಶಿವಮೊಗ್ಗ ಪ್ರವೇಶಿಸಿದಾಗ ಒಮ್ಮೇಲೆ ಹೃದಯ ತುಂಬಿ ಬಂದಿತ್ತು. ಎಚ್.ಪಿ.ಸಿ, ವೀರಭದ್ರೇಶ್ವರ ಟಾಕೀಸ್, ಗುರು ರಾಘವೇಂದ್ರ ದೇವಾಲಯ, ವೆಂಕಟೇಶ್ವರ ನಿಲಯದ ಹಳೆಯ ರೂಂ, ಮೀನಾಕ್ಷಿ ಭವನದ ಬೆಣ್ಣೆ ದೋಸೆ , ಕನ್ನಡ ಕಂಠೀರವ ಡಾ.ರಾಜ್ ಕುಮಾರ್ ಅವರ ಸಿನಿಮಾಗಳು ಎಂದೆದಿಗೂ ಮರೆಯಲಾಗದು ಎಂದರು.
ಕನ್ನಡದಲ್ಲಿಯೇ ಮಾತು ಪ್ರಾರಂಭಿಸಿದ ಸಚಿವರು
ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ ಕನ್ನಡದಲ್ಲಿ ಮಾತನಾಡುವಾಗ ಒಂದು ರೀತಿಯ ರೋಮಾಂಚನವಾಗುತ್ತಿದೆ. ಕನ್ನಡದ ಹಳೆಯ ಹಾಡುಗಳು ಮನಸ್ಸಿನಲ್ಲಿ ಸದಾ ಗುನುಗುತ್ತಿರುತ್ತದೆ.
ಇದೇ ವೇಳೆ ಕಾಲೇಜಿನ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಒಂದು ಸಾವಿರ ಜನ ಆಸನ ಸಾಮಥ್ರ್ಯವಿರುವ ಹಳೆಯ ವಿದ್ಯಾರ್ಥಿಗಳ ಸಭಾಂಗಣಕ್ಕೆ ವೈಯುಕ್ತಿಕವಾಗಿ ಐದು ಲಕ್ಷ ರೂಪಾಯಿಗಳ ಸಹಾಯಧನ ಘೋಷಿಸಿದರು.

READ | ಎರಡು ದಿನ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳು ಜನ ಹಳೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷ ಸಿ.ಆರ್.ನಾಗರಾಜ್, ಕಾರ್ಯದರ್ಶಿ ಎಸ್.ಎನ್.ನಾಗರಾಜ್, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸುಧೀರ್, ಕುಲಸಚಿವ ಪ್ರೊ. ಹೂವಯ್ಯಗೌಡ, ಪ್ರಾಂಶುಪಾಲ ಡಾ.ಕೆ.ನಾಗೇಂದ್ರ ಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ್, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ.ಸುರೇಂದ್ರ , ಉಪಾಧ್ಯಕ್ಷ ರಾಜೇಂದ್ರ ಪ್ರಸಾದ್, ಕಾರ್ಯದರ್ಶಿ ಡಾ.ಕೆ.ಎಂ.ಬಸಪ್ಪಾಜಿ ಉಪಸ್ಥಿತರಿದ್ದರು.

https://suddikanaja.com/2021/04/17/2500-year-old-stone-weapon-found-in-bhadravati/

Leave a Reply

Your email address will not be published. Required fields are marked *

error: Content is protected !!