ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಮೇ 2ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಬೆಳಗ್ಗೆ 10ಕ್ಕೆ ಶಿಕಾರಿಪುರಕ್ಕೆ ತಲುಪಲಿದ್ದಾರೆ. ಶಿಕಾರುಪುರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮೇಲ್ದರ್ಜೆಗೇರಿಸಲು ಉದ್ದೇಶಿಸಿರುವ ಶಿಕಾರಿಪುರ ಮತ್ತು ಶಿರಾಳಕೊಪ್ಪ ಆಸ್ಪತ್ರೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
READ | ಶಿವಮೊಗ್ಗದಲ್ಲಿ ಕ್ರೀಡಾ ಕೇಂದ್ರ ಸ್ಥಾಪನೆಗೆ ₹ 25 ಕೋಟಿ, ಏನಿದರ ಉದ್ದೇಶ?
ಮಧ್ಯಾಹ್ನ 12.30 ಗಂಟೆಗೆ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹೊರಟು 1.30ಕ್ಕೆ ಶಿವಮೊಗ್ಗ ತಲುಪುವರು. 2.30ಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಶಿವಮೊಗ್ಗ ನಗರದಿಂದ ಬೆಂಗಳೂರಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.