ಬೆಂಗಳೂರು ಮೂಲದ ವ್ಯಕ್ತಿ ಶಿವಮೊಗ್ಗದ ಲಾಡ್ಜ್ ನಲ್ಲಿ ಆತ್ಮಹತ್ಯೆ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಲಾಡ್ಜ್ ವೊಂದರಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಜಾಜಿನಗರದ ಎಚ್.ಕೆ.ನರೇಂದ್ರಬಾಬು(42) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಬುಧವಾರ ಮಧ್ಯಾಹ್ನ ಊಟ ಪಾರ್ಸಲ್ ಮಾಡಿಸಿಕೊಂಡು ಲಾಡ್ಜ್ ಕೋಣೆ ಪ್ರವೇಶಿಸಿದ ಈತ ಅದಾದ ಬಳಿಕ ಹೊರಗಡೆ ಬಂದಿಲ್ಲ ಎಂದು ತಿಳಿದುಬಂದಿದೆ.

READ| ನಾಳೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಅನುಮಾನಗೊಂಡು ಪೊಲೀಸರಿಗೆ ಮಾಹಿತಿ
ಶನಿವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಬಿಸಿ ನೀರು ಬಂದಿರುವ ಬಗ್ಗೆ ಮಾಹಿತಿ ನೀಡಲು ಬಾಗಿಲು ತಟ್ಟಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೋಣೆಯಿಂದ ವಾಸನೆ ಕೂಡ ಬರುತಿತ್ತು. ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೋಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ತೆರೆದಿದ್ದಾರೆ. ಆದರೆ, ನರೇಂದ್ರಬಾಬು ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬ್ಲೇಡ್ ನಿಂದ ಕೈ ಕೊಯ್ದುಕೊಂಡಿದ್ದಾರೆ. ಆತ್ಮಹತ್ಯೆಗೆ ಖಚಿತ ಕಾರಣ ತಿಳಿದುಬಂದಿಲ್ಲ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!