ಕುವೆಂಪು ಅಪಮಾನದ ವಿರುದ್ಧ ಮಲೆನಾಡಿನಲ್ಲಿ ಆಕ್ರೋಶ

Rajendra chenni

 

 

ಸುದ್ದಿ ಕಣಜ.ಕಾಂ | DISTRICT | PROTEST 
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಅಪಮಾನದ ವಿರುದ್ಧ ಮಲೆನಾಡಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಜೂನ್ 3ರಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚಿಂತಕ ರಾಜೇಂದ್ರ ಚೆನ್ನಿ, ಕುವೆಂಪು ಅವರಿಗೆ ರೋಹಿತ್ ಚಕ್ರತೀರ್ಥ (ROHIT CHAKRATERTHA) ಅಗೌರವ ತೋರಿಸಿದ್ದಾರೆ. ನಾಡಗೀತೆ ತಿರುಚಿದ್ದಾರೆ. ಹೀಗಾಗಿ, ಅವರನ್ನು ಸಮಿತಿಯಿಂದ ಕೈಬಿಟ್ಟು ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

READ | ಶಿವಮೊಗ್ಗದಲ್ಲಿ‌ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅವಕಾಶ, ಎಷ್ಟು ಸಹಾಯಧನ ಲಭ್ಯ?

ಪಠ್ಯದ ಮೂಲಕ ಪ್ರಕ್ಷಬ್ದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆದಿದೆ. ಇಷ್ಟು ವರ್ಷಗಳಲ್ಲಿ ಯಾವ ಪಠ್ಯ ಪುಸ್ತಕ ರಚನಾ ಸಮಿತಿಯೂ ಸಾಂಸ್ಕೃತಿಕ ಪರಿಸ್ಥಿತಿಯ ಮೇಲೆ ದಬ್ಬಾಳಿಕೆ ನಡೆಸಿರಲಿಲ್ಲ. ಆದರೆ, ಈಗ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹೊಸ ಶಿಕ್ಷಣ ನೀತಿಯ ಹೆಸರಿನಲ್ಲಿ ದಬ್ಬಾಳಿಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಮಾತನಾಡಿ, ದಬ್ಬಾಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜೂನ್ 3ರಂದು ಬೆಳಗ್ಗೆ 10 ಗಂಟೆಗೆ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಏರ್ಪಡಿಸಲಾಗಿದೆ. ಡಿಸಿ ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದರು.
ರೈತ ಮುಖಂಡ ಎಚ್.ಆರ್. ಬಸವರಾಜಪ್ಪ, ಕೆ.ಟಿ. ಗಂಗಾಧರ್, ಎಂ.ಗುರುಮೂರ್ತಿ, ರಮೇಶ್ ಹೆಗ್ಡೆ, ಎಚ್.ಸಿ. ಯೋಗೇಶ್, ಕೆ.ಎಲ್. ಅಶೋಕ್, ಚಂದ್ರೇಗೌಡ ಮತ್ತಿತರರು ಉಪಸ್ಥಿತರಿದ್ದರು.

https://suddikanaja.com/2021/06/08/corona-positive-case-increase-in-shivamogga/

Leave a Reply

Your email address will not be published. Required fields are marked *

error: Content is protected !!