ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(Karnataka State Open University)ದ ‘ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಯುಜಿಸಿ-ನೆಟ್(UGC-NET), ಕೆ-ಸೆಟ್ (K-SET) ಪರೀಕ್ಷೆಗೆ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.
ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(JRF) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ
ಆಸಕ್ತರು ಜೂನ್ 10 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944 ನ್ನು ಸಂಪರ್ಕಿಸಬಹುದು.
https://suddikanaja.com/2022/02/07/a-significant-decision-to-appoint-the-department-of-energy-in-order-to-give-priority-to-kannadigas-candidate-should-pass-kannada-with-50-marks/