ಸುದ್ದಿ ಕಣಜ.ಕಾಂ | DISTRICT | JAN AUSHADHI
ಶಿವಮೊಗ್ಗ: ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಪಾರ್ಮಸಿಸ್ಟ್ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ವಿವರಗಳಿಗಾಗಿ ಸಂಬಂಧ ಪಟ್ಟ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.