ಶಿವಮೊಗ್ಗದಲ್ಲಿ ನಡೆಯಲಿದೆ ಕೋವಿಡ್ ಲಸಿಕಾ ಮೇಳ, ಯಾರೆಲ್ಲ ಲಸಿಕೆ ಪಡೆಯಬಹುದು?

ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ (covid vaccine) ಮೇಳವನ್ನು ಜೂನ್ 8ರಂದು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಲಸಿಕಾಧಿಕಾರಿ ಡಾ. ನಾಗರಾಜ್ ನಾಯ್ಕ್, ಡಿ.ಎಚ್.ಒ ಡಾ. ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಮೊದಲನೇ ಮತ್ತು ಎರಡನೇ ಡೋಸ್ ನೀಡಲಾಗುತ್ತದೆ.

READ | ಗಾಂಧಿ ಬಜಾರ್ ನಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಬೆನ್ನಲ್ಲೇ ಆತಂಕ

ಯಾರಿಗೆಲ್ಲ ಲಸಿಕೆ ನೀಡಲಾಗುವುದು?
ಶಾಲೆಗಳಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಮತ್ತು 15 ರಿಂದ 17 ವರ್ಷದ ಮಕ್ಕಳಿಗೆ ಕ್ರಮವಾಗಿ ಕಾರ್ಬೇವ್ಯಾಕ್ಸ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ನೀಡಲಾಗುವುದು. ಎಲ್ಲ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು.
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚಾಗಿದ್ದು 4ನೇ ಅಲೆ ಬರುವ ಸಂಭವವಿರುವ ಕಾರಣ ಸಾರ್ವಜನಿಕರು ತಪ್ಪದೇ ಕೋವಿಡ್ ಲಸಿಕೆ ಪಡೆಯುವಂತೆ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಕ್ಕಳಿಗೂ ಕೋವಿಡ್ ಲಸಿಕಾಕರಣ ಆರಂಭ, ಮೊದಲು ಲಸಿಕೆ ಪಡೆದವರಾರು?

Leave a Reply

Your email address will not be published.