ಗಾಂಧಿ ಬಜಾರ್ ನಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಬೆನ್ನಲ್ಲೇ ಆತಂಕ

CRIME NEWS SK

 

 

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಮಂಗಳವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಇದರ ಬೆನ್ನಲ್ಲೇ ನಗರದಲ್ಲಿ ಆತಂಕ ಮನೆ ಮಾಡಿದೆ.
ಗಾಂಧಿ ಬಜಾರಿನ ಬಟ್ಟೆ ಮಾರ್ಕೆಟಿನಲ್ಲಿ ಸೆಂಥಿಲ್ ಕುಮಾರ್(40) ಎಂಬಾತನಿಗೆ ಸಂತೋಷ್ ಎಂಬಾತ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ.
ಹಣಕಾಸಿನ ವಿಚಾರಕ್ಕಾಗಿ ಇವರಿಬ್ಬರ ನಡುವೆ ಸುಮಾರು ವರ್ಷಗಳಿಂದ ಗಲಾಟೆ ನಡೆಯುತಿತ್ತು. ಇದೇ ವಿಚಾರಕ್ಕಾಗಿ ಮಂಗಳವಾರ ಸಹ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಆಗ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.

READ | 12 ಚೀಲಗಳಲ್ಲಿ ತುಂಬಿಟ್ಟಿದ್ದ 675 ಕೆಜಿ ಅಡಿಕೆ ಕದ್ದಿದ್ದ ಆರೋಪಿಗಳು ಅರೆಸ್ಟ್

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೆಂಥಿಲ್ ಕುಮಾರ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಹಲ್ಲೆ ಮಾಡಿರುವ ವ್ಯಕ್ತಿಯ ಬಗ್ಗೆ ಇದುವರೆಗೆ ಲಭ್ಯವಾಗಿಲ್ಲ.
ಸೋಶಿಯಲ್ ಮೀಡಿಯಾದಲ್ಲಿ ವದಂತಿ
ಬಟ್ಟೆ ಮಾರ್ಕೆಟಿನಲ್ಲಿ ಹಲ್ಲೆ ಮಾಡಿದ ಬೆನ್ನಲ್ಲೇ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಾಪ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗಾಂಧಿ ಬಜಾರಿನ ಬಟ್ಟೆ ಮಾರುಕಟ್ಟೆ ಯ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

https://suddikanaja.com/2021/01/28/four-person-arrested-in-shivamogga/

Leave a Reply

Your email address will not be published. Required fields are marked *

error: Content is protected !!