ಸುದ್ದಿ ಕಣಜ.ಕಾಂ | DISTRICT | DC GRAMA VASTAVYA
ಶಿವಮೊಗ್ಗ: ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಜೂನ್ 18 ರಂದು ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಹೋಬಳಿಯ ಈಸೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.
READ | ಜೂನ್ 16ರಂದು ಶಿವಮೊಗ್ಗದ ವಿವಿಧೆಡೆ ಕರೆಂಟ್ ಇರಲ್ಲ
ಅಂದು ಬೆಳಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಜೂ.18 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದ್ದಾರೆ.