ಶಿವಮೊಗ್ಗದಲ್ಲಿ ರಾಜ್ಯಪಾಲ ಗೆಹ್ಲೋಟ್’ಗೆ ಭವ್ಯ ಸ್ವಾಗತ, ವಿವಿಧೆಡೆ ಡಿಸಿಗಳಿಂದ ಸನ್ಮಾನ

thaawarchand gehlot governor

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಕರ್ನಾಟಕದ ರಾಜ್ಯಪಾಲ ಥಾವರ್’ಚಂದ್ ಗೆಹ್ಲೋಟ್ (thaawarchand gehlot) ಅವರು ಬುಧವಾರ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಅವರಿಗೆ ಭರ್ಜರಿಯಾಗಿ ಸ್ವಾಗತಿಸಲಾಗಿದೆ.
ಜೂನ್ 16 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವಕ್ಕೆ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭವ್ಯ ಸ್ವಾಗತ ಕೋರಿದರು.

READ | ಸರ್ಕಾರಿ ಶಾಲೆಗಳಿಗೆ ಟಾರ್ಗೆಟ್ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬುಧವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಶಿವಮೊಗ್ಗಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಕುಲಸಚಿವರಾದ ಜಿ.ಅನುರಾಧ, ನವೀನ್ ಕುಮಾರ್, ಕೃಷಿ ವಿಶ್ವವಿದ್ಯಾಲಯದ ಡಾ.ಎಂ. ಹನುಮಂತಪ್ಪ ಸ್ವಾಗತ ಕೋರಿದರು.

Leave a Reply

Your email address will not be published. Required fields are marked *

error: Content is protected !!