ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಮುಂದಿನ ಒಂದು ವರ್ಷದ ಒಳಗಾಗಿ ಬಿ ಕೆಟಗರಿಯಲ್ಲಿರುವ ಎಲ್ಲ ಶಾಲೆಗಳನ್ನು ಎ ಕೆಟಗರಿಗೆ ಮೇಲ್ದರ್ಜೆಗೇರಿಸಬೇಕು ಎಂದು.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿರುವ ಎಲ್ಲ ಶಾಲೆಗಳ ಆರ್.ಟಿ.ಸಿ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಒಂದು ತಿಂಗಳ ಒಳಗಾಗಿ ಶಾಲೆಗಳ ಆರ್.ಟಿಸಿ ಕುರಿತು ಮಾಹಿತಿಯನ್ನು ಸಲ್ಲಿಸಬೇಕು.
ಡಾ.ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ
ಶಾಲೆಗಳಲ್ಲಿ ಲಭ್ಯವಿರುವ ಮೂಲಸೌಲಭ್ಯಗಳನ್ನು ಅನುಸರಿಸಿ ಶಾಲೆಗಳನ್ನು ಎ, ಬಿ ಮತ್ತು ಸಿ ಕೆಟಗರಿಯಲ್ಲಿ ಗುರುತಿಸಲಾಗುತ್ತಿದೆ.
ಡಿಡಿಪಿಐ ಮತ್ತು ಬಿಇಒಗಳು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಗುಣಮಟ್ಟವನ್ನು ನಿರಂತರವಾಗಿ ಗಮನಿಸಬೇಕು. ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಈ ವರ್ಷ ಮಾಡಿದ ರೀತಿಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳಲ್ಲೂ ಮಾಡಬೇಕು ಎಂದರು.
ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಸೂಚನೆ ನೀಡಿದರು.
READ | ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಡೇಟ್ ಫಿಕ್ಸ್, ಯಾವ ಗ್ರಾಮಕ್ಕೆ ಭೇಟಿ?
ಶಾಲೆಗಳನ್ನು ಅಭಿವೃದ್ಧಿಪಡಿಸಿ
ಇಲಾಖೆಯ ಅನುದಾನ ಮಾತ್ರವಲ್ಲದೆ ಉದ್ಯೋಗ ಖಾತ್ರಿ ಯೋಜನೆ, ಜೆಎಂಎಂ ಯೋಜನೆಯ ಲಾಭವನ್ನು ಪಡೆದುಕೊಂಡು ಪ್ರತಿ ಶಾಲೆಗೆ ಕುಡಿಯುವ ನೀರು, ಶೌಚಾಲಯ, ಕಂಪೌಂಡ್, ಆಟದ ಮೈದಾನ ವ್ಯವಸ್ಥೆಯನ್ನು ಮಾಡಬೇಕು.
ಶಾಲೆಗೆ ದಾಖಲಾಗುವ ಮಕ್ಕಳು ವಿದ್ಯಾಭ್ಯಾಸ ಮೊಟಕುಗೊಳಿಸುವ ಪ್ರಕರಣಗಳ ಮೇಲೆ ನಿಗಾ ವಹಿಸಬೇಕು. ವಿಶೇಷವಾಗಿ 5ನೇ ತರಗತಿ ಬಳಿಕ ಹಲವು ಮಕ್ಕಳು ವಿದ್ಯಾಭ್ಯಾಸ ಮುಂದುವರಿಸದೇ ಇರುವ ಬಗ್ಗೆ ಪರಿಶೀಲಿಸಬೇಕು. ಅಂತಹ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ವಿಶೇಷ ದಾಖಲಾತಿ ಅಭಿಯಾನ ನಡೆಸಬೇಕು ಎಂದರು.
ಇದೇ ರೀತಿ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿದ ಬಳಿಕ ಪರೀಕ್ಷೆಗೆ ಹಲವಾರು ವಿದ್ಯಾರ್ಥಿಗಳು ಹಾಜರಾಗದಿರಲು ಕಾರಣ ಪತ್ತೆ ಮಾಡಬೇಕು. ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಸಾವಿರಕ್ಕೂ ಅಧಿಕ ಮಕ್ಕಳು ಈ ರೀತಿ ಪರೀಕ್ಷೆಗೆ ಗೈರು ಹಾಜರಾಗಿರುವುದು ಕಳವಳಕಾರಿ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಆಪ್ತ ಕಾರ್ಯದರ್ಶಿ ಎ.ಆರ್.ರವಿ, ಇಲಾಖೆಯ ಜಂಟಿ ನಿರ್ದೇಶಕ ಕೆಂಚೇಗೌಡ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
https://suddikanaja.com/2022/01/22/there-is-a-shortage-of-teachers-for-government-schools-in-sharavathi-backwaters-village-3-school-has-been-closed/