ಸುದ್ದಿ ಕಣಜ.ಕಾಂ | DISTRICT | MGNREGA
ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA ) ಅಡಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿ ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.
READ | ಭದ್ರಾವತಿಯಲ್ಲಿ 50 ಕೆಜಿ ಗೋಮಾಂಸ ವಶ, 29 ಹಸುಗಳ ರಕ್ಷಣೆ
ಜಿಲ್ಲೆಯ ಎಲ್ಲ ತಾಲ್ಲೂಕಿನ ತಾಂತ್ರಿಕ ಸಿಬ್ಬಂದಿಗೆ ಐದು ತಿಂಗಳ ವೇತನ ಪಾವತಿಯಾಗದಿರುವ ಬಗ್ಗೆ ಹಾಗೂ ವರ್ಷಕ್ಕೆ ಒಂದು ಅಥವಾ ಎರಡು ಬಾರಿ ವೇತನವಾಗುತ್ತಿದ್ದು, ಇದರಿಂದ ಭಾರಿ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ತಾಂತ್ರಿಕ ಸಿಬ್ಬಂದಿ ಪಾಲ್ಗೊಂಡಿದ್ದರು.