₹9.80 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದಿದ ವ್ಯಕ್ತಿ ಅರೆಸ್ಟ್

Soraba police

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದ ಪಿಡಬ್ಲ್ಯೂಡಿ ವಸತಿ ಗೃಹದ (PWD quarters) ವಾಸಿಯೊಬ್ಬರ ಮನೆಯ ಬಾಗಿಲಿನ ಬೀಗ ಒಡೆದು ಚಿನ್ನದ ಆಭರಣ ಹಾಗೂ ನಗದು ಹಣವನ್ನು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಯಮ್ಮಿಗನೂರು ಗ್ರಾಮದ ನಿವಾಸಿ ಮಂಜುನಾಥ ಅಲಿಯಾಸ್ ಬಿದರಿ ಮಂಜು(44) ಬಂಧಿತ‌ ಆರೋಪಿ.

READ | ಪಂಚಾಯಿತಿಯಲ್ಲಿ ಕುಸಿದು ಬಿದ್ದ ವೃದ್ಧೆ, ಗ್ರಾಮ ಲೆಕ್ಕಾಧಿಕಾರಿಗೆ ಕಾರಣ ಕೇಳಿ ನೋಟಿಸ್

₹9.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಸೀಜ್
ಮಂಜುನಾಥ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆಯ ಸಂಬಂಧ ಆರೋಪಿಯನ್ನು ಪುನಃ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಆರೋಪಿ ಬಳಿಯಿಂದ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ 3 ಮತ್ತು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣಗಳು ಸೇರಿ ಒಟ್ಟು 5 ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂದಾಜು ₹9,80 ಲಕ್ಷ ಮೌಲ್ಯದ 182 ಗ್ರಾಂ ಬಂಗಾರದ ಆಭರಣಗಳು ಮತ್ತು 1 ಕೆಜಿ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಸೊರಬ ಪೊಲೀಸ್ ಠಾಣೆ ಸಿಪಿಐ, ಪಿಎಸ್ಐ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ‌.

https://suddikanaja.com/2021/08/28/most-wanted-accused-arrested-in-shiralakoppa/

Leave a Reply

Your email address will not be published. Required fields are marked *

error: Content is protected !!