ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕುವಿನಿಂದ ಇರಿತ

Meggan Hospital

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಮೇ ತಿಂಗಳಿನಲ್ಲಿ ನಡೆದಿದ್ದ ದರೋಡೆ ಪ್ರಕರಣವೊಂದರ ಆರೋಪಿಯನ್ನು ಬಂಧಿಸುವುದಕ್ಕಾಗಿ ತೆರಳಿದ್ದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ಕ್ಲಾರ್ಕ್ ಪೇಟೆಯಲ್ಲಿ ದೊಡ್ಡಪೇಟೆ ಕ್ರೈಂ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ. ಗುರುನಾಯ್ಕ್ ಅವರ ಎದೆಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ರಮೇಶ್ ಕೈಗೂ ಗಾಯವಾಗಿದೆ.

READ | ₹9.80 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದಿದ ವ್ಯಕ್ತಿ ಅರೆಸ್ಟ್

ಖುರೇಷಿ ಬಂಧಿಸಲು ಹೋದಾಗ ಘಟನೆ
ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ಲಷ್ಕರ್ ಮೊಹಲ್ಲಾ ನಿವಾಸಿ ಶಾಹೀದ್ ಖುರೇಷಿ ಎಂಬಾತನ ಹುಡುಕಾಟ ನಡೆದಿತ್ತು. ಬೆಳಗ್ಗೆ ಸಾರ್ವಜನಿಕ ಪ್ರದೇಶದಲ್ಲಿ ಗಲಾಟೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಆಗ ಸಿಬ್ಬಂದಿಯ ಮೇಲೆ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಗುರುನಾಯ್ಕ್ ಹೆಚ್ಚು ಗಾಯವಾಗಿದ್ದು, ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ.
ಗಾಯಗೊಂಡ ತಕ್ಷಣ ಸಿಬ್ಬಂದಿಯನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕ್ಯಾನಿಂಗ್ ಸೇರಿದಂತೆ ಇನ್ನಿತರ ಹೆಚ್ಚುವರಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿಯ ಆರೋಗ್ಯವನ್ನು ವಿಚಾರಿಸಿದ್ದಾರೆ.

https://suddikanaja.com/2021/09/19/irfan-murder-case-4-accused-arrested/

Leave a Reply

Your email address will not be published. Required fields are marked *

error: Content is protected !!