ಶಿವಮೊಗ್ಗದ ಮೂರು ಪಾರಂಪರಿತ ತಾಣಗಳಲ್ಲಿ ಯೋಗ ದಿನ, ಎಲ್ಲಿ, ಹೇಗಿತ್ತು ಆಚರಣೆ?

ಸುದ್ದಿ ಕಣಜ.ಕಾಂ | DISTRICT | WORLD YOGA DAY
ಶಿವಮೊಗ್ಗ: ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಕಚೇರಿ, ವಿವಿಧ ಯೋಗ ಸಂಸ್ಥೆಗಳು, ಎಸ್ಸೆಸ್ಸೆಲ್ಸಿ ಮತ್ತು ಎನ್.ಸಿ.ಸಿ ಘಟಕಗಳ ಸಹಯೋಗದಲ್ಲಿ ಮಂಗಳವಾರ ಜಿಲ್ಲೆಯ ಮೂರು ಪಾರಂಪರಿತ ತಾಣಗಳಾದ ಸಾಗರ ತಾಲ್ಲೂಕಿನ ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣ, ಭದ್ರಾವತಿಯ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಆವರಣ ಹಾಗೂ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

READ | ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕುವಿನಿಂದ ಇರಿತ 

ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ
ಸಾಗರ ತಾಲ್ಲೂಕಿನ ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ (aghoreshwara temple ikkeri) ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ಶಾಸಕ ಹರತಾಳು ಉದ್ಘಾಟಿಸಿ, ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ನಂತರ ಮಾತನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಮ್ಮ ದೇಶದಲ್ಲಿ ರೈತರು ಮತ್ತು ಸೈನಿಕರು ನಿಜವಾದ ಯೋಗಿಗಳಾಗಿದ್ದು ಪ್ರತಿಯೊಬ್ಬರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ಇದರಿಂದ ಮನಸ್ಸು ಮತ್ತು ದೇಹಾರೋಗ್ಯ ಹೆಚ್ಚುತ್ತದೆ ಎಂದರು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ
ಭದ್ರಾವತಿಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ (Sri Lakshmi Narasimha Swamy Temple) ದ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಉದ್ಘಾಟಿಸಿದರು. ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮಾತನಾಡಿ, ಯೋಗಾಭ್ಯಾಸದ ಪ್ರಾಮುಖ್ಯತೆಯನ್ನು ಎಲ್ಲರೂ ತಿಳಿದುಕೊಂಡು ಪ್ರತಿ ಮನೆ ಮನೆಗಳಲ್ಲಿ ಯೋಗಾಭ್ಯಾಸ ಮಾಡಬೇಕೆಂದರು.
ಶ್ರೀ ರಾಮೇಶ್ವರ ದೇವಸ್ಥಾನ
ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ (rameshwara temple thirthahalli) ಆವರಣದಲ್ಲಿ ನಡೆದ ಯೋಗ ದಿನಾಚರಣೆಯನ್ನು ಪ್ರಭಾರ ತಹಸೀಲ್ದಾರ್ ಮಂಜುಳಾ ಭಜಂತ್ರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಯೋಗ ಅತ್ಯಂತ ಅವಶ್ಯಕವಾಗಿದ್ದು, ಮಾನಸಿಕ ಸಮತೋಲನ ಕಾಪಾಡಲು ಹಾಗೂ ದುಶ್ಚಟಗಳಿಂದ ದೂರವಿರಲು ಇದು ಸಹಕಾರಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಡಿಯೋ ರಿಪೋರ್ಟ್: ಈ ವರ್ಷದಿಂದಲೇ ಶಾಲೆ, ಕಾಲೇಜುಗಳಲ್ಲಿ ಯೋಗ ತರಬೇತಿ ಆರಂಭಕ್ಕೆ ತೀರ್ಮಾನ

Leave a Reply

Your email address will not be published.