ರಾಜ್ಯ ಉತ್ಕೃಷ್ಟತಾ ಕೇಂದ್ರ ಹುದ್ದೆ ನೇಮಕಾತಿ ಅರ್ಜಿ ಆಹ್ವಾನ

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಖೇಲೋ ಇಂಡಿಯಾ ಯೋಜನೆ ಅಡಿ ಬರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರನ್ನು ರಾಜ್ಯ ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೇಟಿಕ್ಸ್, ಮತ್ತು ಶೂಟಿಂಗ್) ಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಗ್ರೇಡ್ 2 ಮತ್ತು ಸ್ಪೋರ್ಟ್ಸ್ ಮೆಸ್ಸ್ಯೂರ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

READ | ‘ವಿಂಡೋಸೀಟ್’ ರಿಲೀಸಿಂಗ್ ಡೇಟ್ ಫಿಕ್ಸ್, ಕಥಾ ಹಂದರ ಬಿಚ್ಚಿಟ್ಟ ಶಿವಮೊಗ್ಗದವರೇ ಆದ ಶೀತಲ್ ಶೆಟ್ಟಿ

ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆ ಅರ್ಜಿಯನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿರುವ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ನೋಟರಿ ಮಾಡಿಸಿ ಜೂನ್ 27 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ‌ ಸಂಖ್ಯೆ‌ 08182-223328 ಅನ್ನು ಸಂಪರ್ಕಿಸುವುದು.

ಖೇಲೋ ಇಂಡಿಯಾ ಯೋಜನೆ ಅಡಿ ಮಲೆನಾಡಿಗೆ ಬರಲಿದೆ ಕ್ರೀಡಾ ಗ್ರಾಮ, ಸೆಂಟ್ರಲ್ ಟೀಂ ಪರಿಶೀಲನೆ, ಇನ್ನೇನಾಯ್ತು?

Leave a Reply

Your email address will not be published.