ಸುದ್ದಿ ಕಣಜ.ಕಾಂ | DISTRICT | POWER CUT
ಶಿವಮೊಗ್ಗ: ವಿವಿಧ ಕಾರಣಗಳಿಂದಾಗಿ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಜೂನ್ 24, 25ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.
READ | ಶಿವಮೊಗ್ಗ ನಗರಕ್ಕೆ ಕಲುಷಿತ ನೀರು ಪೂರೈಕೆ ವಿರುದ್ಧ ಕಾರ್ಪೋರೇಟರ್ ಖಡಕ್ ವಾರ್ನಿಂಗ್
ಎಲ್ಲೆಲ್ಲಿ ಯಾವ ಕಾರಣಕ್ಕೆ ವ್ಯತ್ಯಯ?
- ಸಂತೆಕಡೂರು ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಪಾ ಮತ್ತು ನಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
- ರೈಲ್ವೆ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 24 ಮತ್ತು 25 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗ 1ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.