ಹಿಂದೂ ಹರ್ಷ ಹತ್ಯೆ ಪ್ರಕರಣ, ಶಿವಮೊಗ್ಗಕ್ಕೆ ಆಗಮಿಸಿದ ಎನ್.ಐ.ಎ ತಂಡ

 

ಸುದ್ದಿ ಕಣಜ.ಕಾಂ | KARNATAKA | HARSHA MURDER CASE
ಶಿವಮೊಗ್ಗ: ಬಜರಂಗ ದಳ ಕಾರ್ಯಕರ್ತ ಹಿಂದೂ ಹರ್ಷ(28)ನ ಹತ್ಯೆ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ನಗರಕ್ಕೆ ಭೇಟಿ ನೀಡಿದ್ದು, ಆರೋಪಿಗಳ ಮನೆಗಳಿಗೆ ಭೇಟಿ ನೀಡಿದೆ.
ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಎನ್.ಐ.ಎ ಅಧಿಕಾರಿಗಳ ತಂಡವು ಗುರುವಾರ ಬೆಳಗ್ಗೆ ಭೇಟಿ ನೀಡಿದ್ದು, ನಗರ ಪ್ರವಾಸಿ ಮಂದಿರದಲ್ಲಿ ತಂಗಿದೆ ಎಂದು ಮೂಲಗಳು ತಿಳಿಸಿವೆ.

READ | ಹಿಂದೂ ಹರ್ಷ ಹತ್ಯ ಪ್ರಕರಣ, ತನಿಖೆ ಆರಂಭಿಸಿದ ಎನ್.ಐ.ಎ, ಎಲ್ಲೆಲ್ಲಿ ಭೇಟಿ?

ಹರ್ಷನ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಆರೋಪಿಗಳಿಗೆ ಮನೆಗಳಿಗೆ ಭೇಟಿ ನೀಡಿದ್ದು, ಪ್ರಮುಖ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಇದಕ್ಕಾಗಿ ಸ್ಥಳೀಯ ಪೊಲೀಸರ ಸಹಾಯವನ್ನು ಸಹ ಪಡೆಯಲಾಗುತ್ತಿದೆ.
ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎಗೆ ಒಪ್ಪಿಸಿದ್ದೇ ಹಲವು ಸಲ ಅಧಿಕಾರಿಗಳ ತಂಡವು ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಒಟ್ಟು 18 ಕಡೆ ಭೇಟಿ ನೀಡುವ ಸಾಧ್ಯತೆ ಇದೆ. ಫೆಬ್ರುವರಿ 20ರಂದು ಹರ್ಷನ ಹತ್ಯೆ ಮಾಡಲಾಗಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿದ್ದರಾಮಯ್ಯ @ ಹುಣಸೋಡು, 1 ಗಂಟೆ ಅಲ್ಲಿ ಏನೇನು ಮಾಡಿದ್ರು, ಇಲ್ಲಿದೆ ಮಾಹಿತಿ

Leave a Reply

Your email address will not be published.