ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಅನ್ವರ್ ಕಾಲೋನಿಯ ಮನೆಯ ಮುಂದೆ ನಿಲ್ಲಿಸಿದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು, ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆ (Old Town Police Station) ಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
READ | 27 ವರ್ಷಗಳ ಬಳಿಕ ಓಟ ನಿಲ್ಲಿಸಿದ ಇಂಟರ್ನೆಟ್ ಎಕ್ಸ್ಪ್ಲೋರರ್!
ಅಬ್ರಾರ್ ಎಂಬುವವರ ಬೈಕ್ ಅನ್ನು ಕಳ್ಳತನ ಮಾಡಲಾಗಿದೆ. ಜೂನ್ 4ರ ರಾತ್ರಿ ಮನೆಯ ಮುಂದೆ ಬೈಕ್ ನಿಲ್ಲಿಸಿದ್ದು, ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಇರಲಿಲ್ಲ. ಆಸ್ಪತ್ರೆ ನಿಮಿತ್ತ ಬೇರೆಡೆ ಹೋಗಿದ್ದರಿಂದ ವಾಪಸ್ ಬಂದಿದ್ದೇ ಶನಿವಾರ ದೂರು ನೀಡಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.