ಶಿವಮೊಗ್ಗದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

IMG 20220517 232257 102

 

 

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

READ | ವಿಶ್ವ ಮೊಸಳೆಗಳ ದಿನ, ಜಗತ್ತಿನ ದೊಡ್ಡ ಮೊಸಳೆ ಯಾವುದು? ಎಷ್ಟು ಪ್ರಕಾರದ ಮೊಸಳೆಗಳಿವೆ, ಇಲ್ಲಿವೆ ಮೊಸಳೆ ಜಗತ್ತಿನ ಸ್ವಾರಸ್ಯ ವಿಚಾರಗಳು

ಎಲ್ಲೆಲ್ಲಿ ನೇಮಕಾತಿ?
ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗದಿತ ನಮೂನೆ ಅರ್ಜಿಗಳನ್ನು ಆಯಾ ಗ್ರಾ.ಪಂ.ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜುಲೈ 14ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಸಿ.ಜೆ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತಿ, ಜಿ.ಕೇ.ಗ್ರಂ.ದ ಉಪನಿರ್ದೇಶಕರ ಕಚೇರಿ ದೂ.ಸಂ.: 08182-222905 ಸಂಪರ್ಕಿಸುವುದು.

Leave a Reply

Your email address will not be published. Required fields are marked *

error: Content is protected !!