ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ.
ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು.
ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
READ | ಸಿದ್ದರಾಮಯ್ಯ ವಿರುದ್ಧ ಮತ್ತೆ ಈಶ್ವರಪ್ಪ ವಾಗ್ದಾಳಿ, ಮಾಡಿದ ಆರೋಪಗಳೇನು?
₹10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣ ಸೀಜ್
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ 1 ದೇವಸ್ಥಾನ ಕಳ್ಳತನ ಪ್ರಕರಣ, ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ 2 ಹಗಲು ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ₹10,25,000 ಒಟ್ಟು 220 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 132 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು ₹5000/- ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.
https://suddikanaja.com/2021/09/25/bike-theft-accused-arrested/