ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಶಾಸಕ ಕೆ.ಎಸ್.ಈಶ್ವರಪ್ಪ ಅವರು ಸಿದ್ಧರಾಮೋತ್ಸವದ (Sidharamotsava) ಬಗ್ಗೆ ಟೀಕಾಪ್ರಹಾರ ಮುಂದುವರಿಸಿದ್ದಾರೆ.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಭಾಗವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಧೈರ್ಯವಿದ್ದರೆ ಅದನ್ನು ವಿರೋಧಿಸಬೇಕಿತ್ತು. ಅದನ್ನು ಬಿಟ್ಟು ಸಿದ್ಧರಾಮೋತ್ಸವಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ಉತ್ಸವ ಮಾಡಲು ಹೊರಟಿರುವುದು ಡಿಕೆಶಿ ಶಿಖಂಡಿತನವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
READ | ಗುಡ್ಡೇಕಲ್ ಜಾತ್ರೆಗೆ ಡೇಟ್ ಫಿಕ್ಸ್, ಹೇಗಿರಲಿದೆ ಆಚರಣೆ?
ಇಬ್ಬರೂ ಗೆಲ್ಲುವುದೇ ಡೌಟ್
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಆದರೆ, ವಾಸ್ತವದಲ್ಲಿ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದರೂ ಗೆಲ್ಲುವುದೇ ಅನುಮಾನ ಎಂದು ವ್ಯಂಗ್ಯವಾಡಿದರು.