ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸುಸ್ತಾದಂತೆ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
READ | ಶಿವಮೊಗ್ಗ, ಭದ್ರಾವತಿ ರೈಲ್ವೆ ಓವರ್ ಬ್ರಿಡ್ಜ್ ಪರಿಶೀಲಿಸಿದ ಸಂಸದ ರಾಘವೇಂದ್ರ, ಕಾಮಗಾರಿಗಳ ಪೂರ್ಣ ಮಾಹಿತಿ ಇಲ್ಲಿದೆ
ಮೃತ ವ್ಯಕ್ತಿಯು ಸುಮಾರು 5.8 ಅಡಿ ಎತ್ತರ, ಕಪ್ಪು ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು, ಅರ್ಧ ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೈಮೇಲೆ ಹಸಿರು ಬಣ್ಣದ ಅರ್ಧ ತೋಳಿನ ಟೀ-ಶರ್ಟ್, ಮಾಸಲು ಬಣ್ಣದ ಚಡ್ಡಿ ಧರಿಸಿದ್ದು ಮೃತನ ಬಲಗೈನಲ್ಲಿ ಶ್ರೀ ಮಾರುತಿ ಎಂಬ ಹೆಸರಿನ ಹಚ್ಚೆ ಗುರುತು ಇರುತ್ತದೆ.
ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೆÇಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪೊಲೀಸ್ ಪ್ರಕಟಣೆ ತಿಳಿಸಿದೆ.