ಸುದ್ದಿ ಕಣಜ.ಕಾಂ | DISTRICT | SCHOOL HOLIDAY
ಶಿವಮೊಗ್ಗ: ಜಿಲ್ಲೆಯ ಹಲವೆಡೆ ನಿರಂತರ ಮಳೆ ಸುರಿಯುತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 12ರಂದು ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ಪರಮೇಶ್ವರ್ ಆದೇಶದಲ್ಲಿ ತಿಳಿಸಿದ್ದಾರೆ.
ಯಾವ ತಾಲೂಕುಗಳಿಗೆ ರಜೆ?
ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ವರ್ಷಧಾರೆ ಮುಂದುವರಿದಿದೆ. ಹೀಗಾಗಿ, ಮೂರು ತಾಲೂಕುಗಳಿಗೆ ಅನ್ವಯವಾಗುವಂತೆ ಶಾಲೆಗಳಿಗೆ ರಜೆ ನೀಡಲಾಗಿದೆ.