ಶಿವಮೊಗ್ಗದಲ್ಲಿ‌ ಜು.15ರಂದು ನಡೆಯಲಿದೆ ಉದ್ಯೋಗ ಮೇಳ‌, ಯಾರೆಲ್ಲ‌ ಭಾಗವಹಿಸಬಹುದು?

 

ಸುದ್ದಿ ಕಣಜ.ಕಾಂ | DISTRICT | JOB FAIR
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ವಿಶ್ವ ಯುವಕೌಶಲ ದಿನಾಚರಣೆ ಅಂಗವಾಗಿ ಜುಲೈ 15ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

READ | ತಡರಾತ್ರಿ ಅನ್ಯಕೋಮಿನವರಿಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಈ‌ ದಾಖಲೆಗಳನ್ನು ತೆಗೆದುಕೊಂಡು ಬನ್ನಿ
ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9380663606 /9482023412 ಗಳನ್ನು ಸಂಪರ್ಕಿಸುವುದು.

ವೇದಿಕೆಯ ಮೇಲೆ ಕಣ್ಣೀರಿಟ್ಟ ಬೇಳೂರು, ‘ದೀವರ ಅಭಿವೃದ್ಧಿಗೆ ಧರ್ಮಗುರು ಅಗತ್ಯ’

Leave a Reply

Your email address will not be published.