ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ನಗರದ ಪೊಲೀಸ್ ಚೌಕಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ವೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ರೌಡಿಶೀಟರ್ ಹಂದಿ ಅಣ್ಣಿ ಕೊಲೆಯಾದ ವ್ಯಕ್ತಿ. ಆರು ಜನ ದುಷ್ಕರ್ಮಿಗಳು ಬಂದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹತ್ಯೆಗೆ ಖಚಿತ ಕಾರಣ ತಿಳಿದುಬಂದಿಲ್ಲ. ಆದರೆ, ಹಳೇ ದ್ವೇಷ ಇರಬಹುದು ಎಂದು ಶಂಕಿಸಲಾಗಿದೆ.