ಮಳೆ‌ ಹಾನಿ ಪ್ರದೇಶಗಳಿಗೆ ಉಸ್ತುವಾರಿ ಸಚಿವ‌ ಕೆ.ಸಿ.ನಾರಾಯಣಗೌಡ ಭೇಟಿ, ನೀಡಿದ ಭರವಸೆಗಳೇನು?

KC Narayanagowda

 

 

ಸುದ್ದಿ‌ ಕಣಜ.ಕಾಂ | DISTRICT | RAINFALL
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆ ಹಾನಿ, ಬೆಳೆ ನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗದಿಪಡಿಸಿದ ಪರಿಹಾರ ಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಹೇಳಿದರು.
ಶಿವಮೊಗ್ಗಕ್ಕೆ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿದರು.
ಇದುವರೆಗೆ ಜಿಲ್ಲೆಯಲ್ಲಿ ಸುಮಾರು 246 ಮನೆಗಳು ಭಾಗಶಃ ಹಾಗೂ 26 ಮನೆಗಳು ಸಂಪೂರ್ಣ ಕುಸಿದಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಒರ್ವ ವ್ಯಕ್ತಿ ಮರಣ ಹೊಂದಿರುವ ಬಗ್ಗೆಯೂ ಮಾಹಿತಿ ಪಡೆಕೊಳ್ಳಲಾಗಿದ್ದು, ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಪರಿಹಾರಧನ ನೀಡುವಂತೆ ಸೂಚಿಸಲಾಗಿದ್ದು, ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಎಂದರು.

READ | ಕೆಲ ಸೆಕೆಂಡ್‍ಗಳಲ್ಲಿ ಮರ್ಡರ್, ಹಂದಿ ಅಣ್ಣಿ ಕೊಲೆಯ ಬಗ್ಗೆ ತಿಳಿಯಲೇಬೇಕಾದ ವಿಷಯಗಳಿವು

ಮಹಿಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಆಯಾ ತಾಲೂಕಿನ ಕಂದಾಯಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ತಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸುವಂತೆ ಸೂಚಿಸಿದರು.
ಶಿವಮೊಗ್ಗ ನಗರದ ಶೇಷಾದ್ರಿಪುರಂ, ಬಾಪೂಜಿ ನಗರಗಳಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಅವರು ಸಂತ್ರಸ್ತರಿಗೆ ತಕ್ಷಣದ ಪರಿಹಾರಧನವನ್ನು ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಉಪ ವಿಭಾಗಾಧಿಕಾರಿ ಎಸ್.ಬಿ.ದೊಡ್ಡಗೌಡರ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ತಹಸೀಲ್ದಾರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

https://suddikanaja.com/2021/09/23/cm-basavaraj-bommai-instructed-to-re-start-stone-crushers-in-shivamogga/

Leave a Reply

Your email address will not be published. Required fields are marked *

error: Content is protected !!