ಸುದ್ದಿ ಕಣಜ.ಕಾಂ | DISTRICT | COURT NEWS
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ 5 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದು ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹60,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
READ | ವಿಶ್ವ ಹಾವುಗಳ ದಿನ ಇಂದು, ಸರ್ಪ ಜಗತ್ತಿನ ವಿಶೇಷ ಇಲ್ಲಿದೆ, ಕಡಿತ ತಪ್ಪಿಸಲು ಹೀಗೆ ಮಾಡಿ
ಬಿ.ಸಿ. ವೆಂಕಟೇಶ್(29) ಶಿಕ್ಷೆಗೆ ಗುರಿಯಾದಾತ. ಆಟವಾಡುತ್ತಾ ಇದ್ದಾಗ ವೆಂಕಟೇಶ್ ಎಂಬುವವನು ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ನೀಡಿದ ದೂರಿನ ಅನ್ವಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದರು.
ವಿಚಾರಣೆ ನಡೆಸಿದ The Addl District and Sessions Court, FTSC–II (POCSO) ನ್ಯಾಯಾಧೀಶ ಜೆ.ಎನ್. ಮೋಹನ್ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಚಾಕ್ಲೆಟ್ ಕೊಡಿಸುವುದಾಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದನಿಗೆ 20 ವರ್ಷ ಜೈಲು