ಡಿಸಿ ಕಚೇರಿ ಮುಂದೆ ಒಂಟಿ ಕಾಲಲ್ಲಿ ಪ್ರತಿಭಟನೆ, ಕಾರಣವೇನು?

 

ಸುದ್ದಿ ಕಣಜ.ಕಾಂ | DISTRICT | PROTEST
ಶಿವಮೊಗ್ಗ: ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ಮಾಡಿದರು.
ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಪ್ರತಿಭಟಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

READ | 2 ವಾರದ ಮಳೆಗೆ ಶಿವಮೊಗ್ಗದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ನಷ್ಟ, ಎಲ್ಲಿ‌ ಏನಾಗಿದೆ?

ಬೇಡಿಕೆಗಳೇನು?
ಪಶ್ಚಿಮಘಟ್ಟಗಳ 10 ಜಿಲ್ಲೆಗಳನ್ನೊಳಗೊಂಡ 20 ಸಾವಿರಕ್ಕೂ ಚದರ ಕಿಲೋ ಮೀಟರ್ ಪ್ರದೇಶವನ್ನು ಕೇಂದ್ರದ ಪರಿಸರ ಇಲಾಖೆ ಅವೈಜ್ಞಾನಿಕವಾಗಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದೆ. ಇದು ಜನವಿರೋಧಿಯಾಗಿದ್ದು, ಅರಣ್ಯವಾಸಿ ಹಾಗೂ ಆದಿವಾಸಿಗಳ ಬದುಕನ್ನು ಕಸಿದುಕೊಂಡಂತಾಗುತ್ತದೆ. ಈಗಿರುವ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಕಾನೂನುಗಳನ್ನೇ ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಸಾಕು. ಹೊಸ ಆದೇಶವೇನೂ ಬೇಕಾಗಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಸರ್ಕಾರ ತಕ್ಷಣವೇ ಕಸ್ತೂರಿ ರಂಗನ್ ವರದಿಯನ್ನು ಹಿಂಪಡೆಯಬೇಕು. ಬೆಂಗಳೂರಿನಲ್ಲಿ ಜುಲೈ 18 ರಂದು ಮಲೆನಾಡು ಭಾಗದ ಶಾಸಕರ, ಜನಪ್ರತಿನಿಧಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ತೀರ್ಮಾನ ತೆಗೆದುಕೊಂಡು ಕೇಂದ್ರಕ್ಕೆ ರಾಜ್ಯ ಸರ್ಕಾರ ತಿಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಎಲ್.ಆರ್. ಗೋಪಾಲಕೃಷ್ಣ, ಹೆಚ್.ಎಂ. ಸಂಗಯ್ಯ, ಟಿ.ಆರ್. ಕೃಷ್ಣಪ್ಪ, ಎಸ್.ವಿ. ರಾಜಮ್ಮ, ಚಾಬೂಸಾಬ್, ಶಂಕ್ರಾ ನಾಯ್ಕ್ ಉಪಸ್ಥಿತರಿದ್ದರು.

ಮಲೆನಾಡಿನ ಒಂಟಿ ಮನೆಗಳ ಮೇಲೆ ಮತ್ತೆ ಟಾರ್ಗೆಟ್, ಹಾಡಹಗಲೇ ದರೋಡೆ, ಮಹಿಳೆಯನ್ನು ಥಳಿಸಿ ಹಣ ಲೂಟಿ

Leave a Reply

Your email address will not be published.