ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ನಗರದಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ (30 ವರ್ಷದೊಳಗಿನ ವಯಸ್ಕರ ಮೇಲೆ) ನಡೆಸಿ ಅಪರಾಧ ಹಿನ್ನೆಲೆ ಉಳ್ಳವರ(RS) ಮನೆಗಳ ತಪಾಸಣೆ ನಡೆಸಿದರು.
READ | ಶಿವಮೊಗ್ಗದ ವಿವಿಧ ಶಾಲಾ, ಕಾಲೇಜುಗಳ ಸುತ್ತ ದಿಢೀರ್ ದಾಳಿ, 10 FIR ದಾಖಲು
ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣ?
ನಗರದ ವೈನ್ ಶಾಪ್ ಸುತ್ತ ಹಾಗೂ ನಿರ್ಜನ ಪ್ರದೇಶಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು, 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ, 1 ತಲ್ವಾರ್, 4 ಹರಿತವಾದ ಡ್ಯಾಗರ್ ಗಳನ್ನೂ ವಶಕ್ಕೆ ಪಡೆಯಲಾಗಿದೆ.
ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ಇವತ್ತಿನ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಸಿಬ್ಬಂದಿ ನಿಯೋಜಿಸಿ ಒಂದು ಗಂಟೆಗಳ ವಿಶೇಷ ಕಾರ್ಯಾಚರಣೆ ಕೈಗೊಂಡಿರುತ್ತದೆ ಎಂದು ಪೊಲೀಸ್ ಇಲಾಖೆ ಅಧಿಕೃತ ಮೂಲಗಳು ತಿಳಿಸಿವೆ.