
ಸುದ್ದಿ ಕಣಜ.ಕಾಂ | CITY | RAGIGUDDA
ಶಿವಮೊಗ್ಗ: ರಾಗಿಗುಡ್ಡದಲ್ಲಿ 74 ಅಡಿ ಎತ್ತರದ ಶಿವಲಿಂಗ ನಿರ್ಮಾಣ ಮಾಡಲಾಗುವುದು ಎಂದು ಶಾಸಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ರಾಗಿಗುಡ್ಡಕ್ಕೆ ಭೇಟಿ ನೀಡಿದ ಅವರು ರಾಗಿಗುಡ್ಡವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಗಿಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಒಂದು ವಿಶೇಷ ಯೋಜನೆ ರೂಪಿಸಲಾಗಿದೆ. ದೇವಸ್ಥಾನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರಾಗಿದೆ. ಈಗಾಗಲೇ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದ 5 ಕೋಟಿ ರೂ. ಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು. ಸುಮಾರು 2.20 ಎಕರೆ ಜಾಗದಲ್ಲಿ ದೇವಸ್ಥಾನ ನಿರ್ಮಿಸಲಾಗುವುದು. ಜಿಲ್ಲಾಧಿಕಾರಿ ಕೂಡ ಜಾಗ ಮಂಜೂರು ಮಾಡಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ರಾಜ್ಯಮಟ್ಟದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸುಮಾರು 74 ಅಡಿ ಎತ್ತರದ ಶಿವಲಿಂಗ ನಿರ್ಮಿಸಲಾಗುವುದು ಎಂದರು.
READ | ಶಿವಮೊಗ್ಗ ಸಕ್ರೆಬೈಲು ಆನೆಬಿಡಾರದಲ್ಲಿ ಇನ್ಮುಂದೆ ಆನೆ ಸವಾರಿಯೊಂದಿಗೆ ಬೋಟಿಂಗ್ ಮಜಾ
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಕೆ.ಈ.ಕಾಂತೇಶ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ತಹಸೀಲ್ದಾರ್ ನಾಗರಾಜ್, ವಿವಿಧ ಇಲಾಖೆ ಅಧಿಕಾರಿಗಳು, ಬಿಜೆಪಿ ಮುಖಂಡರು ಇದ್ದರು.
ಇದು ಸಿಟಿಜಿನ್ ವಾಯ್ಸ್ | ಸ್ವಚ್ಚ ಭಾರತದ ಕನಸು ಭಗ್ನ, ಅಧಿಕಾರಿಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ…