ಶಿವಮೊಗ್ಗದ ಸಕ್ರೆಬೈಲು ಆನೆಬಿಡಾರದಲ್ಲಿ ಇನ್ಮುಂದೆ ಆನೆ ಸವಾರಿಯೊಂದಿಗೆ ಬೋಟಿಂಗ್ ಮಜಾ

Boat sakrebailu

 

 

ಸುದ್ದಿ ಕಣಜ.ಕಾಂ | DISTRICT | TOURISM 
ಶಿವಮೊಗ್ಗ: ಸಕ್ರೆಬೈಲು ಆನೆಬಿಡಾರದಲ್ಲಿ ಪ್ರವಾಸಿಗರಿಗೆ ಇನ್ಮುಂದೆ ಆನೆಗಳ ಸವಾರಿಯೊಂದಿಗೆ ಬೋಟಿಂಗ್ ಮಜಾ ಕೂಡ ಸಿಗಲಿದೆ.
ಪ್ರವಾಸಿಗರನ್ನು ಸೆಳೆಯುವುದಕ್ಕಾಗಿ ತುಂಗಾ ಹಿನ್ನೀರಿನಲ್ಲಿ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯು ಬೋಟಿಂಗ್ ವ್ಯವಸ್ಥೆ ಮಾಡಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯ, ಹೊರ ರಾಜ್ಯಗಳಿಂದ ಸಕ್ರೆಬೈಲಿಗೆ ಬರುವ ಪ್ರವಾಸಿಗರಿಗೆ ಶುಕ್ರವಾರದಿಂದ ಬೋಟಿಂಗ್ ಮೋಜು ಕೂಡ ಲಭ್ಯವಾಗಲಿದೆ.

boat Sakrebailu 1

READ | 2024ರ ವೇಳೆಗೆ ಸಿಗಲಿದೆ ಸಾರವರ್ಧಿತ ಅಕ್ಕಿ, ಏನಿ ವಿಶೇಷ, ಸಾರವರ್ಧಿತ ಅಕ್ಕಿ ಪತ್ತೆ ಹೇಗೆ? 

ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ
ದೋಣಿ ವಿಹಾರ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಜಿಲ್ಲೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿದ ಪ್ರಗತಿ ಸಾಧಿಸಲು ವಿಫುಲ ಅವಕಾಶಗಳಿವೆ. 460 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಯೋಜನೆ, 1 ಕೋಟಿ ರೂ. ವೆಚ್ಚದಲ್ಲಿ ಹೊಸನಗರದ ಕೋಟೆ, 2 ಕೋಟಿ ರೂ. ವೆಚ್ಚದಲ್ಲಿ ಕವಲೇದುರ್ಗ, 2 ಕೋಟಿ ರೂ.ಗಳ ವೆಚ್ಚದಲ್ಲಿ ಶಿವಪ್ಪನಾಯಕನ ಅರಮನೆ, ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿ, ಜೋಗ ಜಲಪಾತದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಹಲವು ಪ್ರಾಣಿಗಳನ್ನು ಇಲ್ಲಿಗೆ ತರಲಾಗಿದೆ. ಕೇಂದ್ರ ಕೂಡ ಹಲವು ಯೋಜನೆಗಳಿಗೆ ಅನುಮೋದನೆ ನೀಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕೊಲ್ಲೂರು-ಕೊಡಚಾದ್ರಿ ನಡುವೆ ಸಂಪರ್ಕ ಕಲ್ಪಿಸುವ ಕೇಬಲ್ ಕಾರ್ ಗೆ 1000 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರೆತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜ್, ಸಕ್ರೆಬೈಲಿನ ವ್ಯವಸ್ಥಾಪಕ ಎ.ಪಿ.ಕಿರಣ್, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ನಿರ್ದೇಶಕ ರಾಜೇಶ್ ಕಾಮತ್, ಜ್ಯೋತಿಪ್ರಕಾಶ್, ಬಳ್ಳೆಕರೆ ಸಂತೋಷ್, ಮಾಲತೇಶ್ ಉಪಸ್ಥಿತರಿದ್ದರು.

https://suddikanaja.com/2021/12/16/uttar-pradesh-government-requested-karnataka-to-send-two-elephants-official-team-visited-sakrebailu-elephant-camp-for-elephant/

Leave a Reply

Your email address will not be published. Required fields are marked *

error: Content is protected !!