ಅನಧಿಕೃತವಾಗಿ ಪ್ರಾಣಿ ವಧೆ, ಸಾಗಾಣಿಕೆ ತಡೆಯಲು‌ ಸಮಿತಿ, ಡಿಸಿ‌ ಖಡಕ್‌ ವಾ‌ರ್ನಿಂಗ್

dc selvamani

 

 

ಸುದ್ದಿ‌ ಕಣಜ.ಕಾಂ‌ | DISTRICT | DC MEETING
ಶಿವಮೊಗ್ಗ: ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ, ಗೋವು ಹತ್ಯೆ ತಡೆಗಟ್ಟಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ಕರೆಯಲಾಯಿತು.

READ | ಶಿವಮೊಗ್ಗ ಬಳಿ ನಡೀತು ಭೀಕರ ಅಪಘಾತ, 40 ಜನರಿಗೆ ಗಾಯ, ಡ್ರೈವರ್ ಸ್ಥಿತಿ ಗಂಭೀರ

ಅನಧಿಕೃತವಾಗಿ ಪ್ರಾಣಿಗಳ ವಧೆ ಹಾಗೂ ಪ್ರಾಣಿ ಸಾಗಾಣಿಕೆ ಮಾಡುವುದನ್ನು ತಡೆಯುವ ಕುರಿತು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಖಡಕ್‌ ವಾರ್ನಿಂಗ್ ನೀಡಿದರು.

ಯಾವುದೇ ರೀತಿಯ ಗಲಭೆಯಂತಹ ಘಟನೆ ಸಂಭವಿಸಿದರೆ ತಕ್ಷಣ ನಮಗೆ ತಿಳಿಸಬೇಕು. ತಾಲ್ಲೂಕುಗಳು ಮತ್ತು ನಗರದಲ್ಲಿ ಹಬ್ಬದ ದಿನ ಗಸ್ತು ತಿರುಗಲು ಒಂದು ತಂಡವನ್ನು ರಚಿಸಬೇಕು.
ಬಿ.ಎಂ.ಲಕ್ಷ್ಮಿಪ್ರಸಾದ್ | ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

  • ಡಿಸಿ‌ ನೀಡಿದ ಸೂಚನೆಗಳೇನು?
  • ಬಕ್ರೀದ್ ವೇಳೆ ಕಾನೂನುಬಾಹಿರ ಜಾನುವಾರುಗಳ ವಧೆ ಮತ್ತು ಸಾಗಾಣಿಕೆ ಕಂಡು ಬಂದಲ್ಲಿ ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ರಚಿಸಲಾಗಿರುವ ತಂಡ ಜಾಗೃತವಾಗಿರಬೇಕು.
  • ಹಬ್ಬದ ವೇಳೆ ಸಾರ್ವಜನಿಕ ಕಸಾಯಿಖಾನೆಗಳಲ್ಲಿ ಸ್ವಚ್ಚತೆ ಕಾಪಾಡಬೇಕು. ತ್ಯಾಜ್ಯವನ್ನು ಅಲ್ಲಲ್ಲಿ ಎಸೆಯದಂತೆ ಕ್ರಮ ವಹಿಸಬೇಕು. ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಲು ಪಾಲಿಕೆ ವತಿಯಿಂದ ಒಂದು ಹೆಚ್ಚುವರಿ ತಂಡ ರಚಿಸಬೇಕು. ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಬೇಕು.
  • ಗಲಭೆ, ದೊಂಬಿಗಳು ಉಂಟಾದಲ್ಲಿ ತಕ್ಷಣ ಪೊಲೀಸ್ ಇಲಾಖೆಯ ತಂಡಕ್ಕೆ ತಿಳಿಸಬೇಕು. ವಿಶೇಷ ತಂಡವು ಹಬ್ಬದ ಸಮಯದಲ್ಲಿ ನಿಗದಿಪಡಿಸಲಾದ ಸಮಯದವರೆಗೆ ಕರ್ತವ್ಯನಿರತರಾಗಿದ್ದು ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಆಗದಂತೆ ನಿಗಾ ವಹಿಸಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ, ಆರ್.ಟಿ.ಓ ಮತ್ತು ಮಹಾನಗರ ಪಾಲಿಕೆಯು ಪೊಲೀಸ್ ಮತ್ತು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ತಂಡದಲ್ಲಿ ಕರ್ತವ್ಯ ನಿರ್ವಹಿಸಬೇಕು

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಶಿವಯೋಗಿ ಎಲಿ, ಪಾಲಿಕೆ ಪಶುವೈದ್ಯಾಧಿಕಾರಿ ಡಾ.ರೇಖಾ, ಆರ್.ಟಿ.ಓ ಅಧಿಕಾರಿ, ಇತರೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

https://suddikanaja.com/2021/07/17/anti-cow-slaughter-bill-strict-implementation/

Leave a Reply

Your email address will not be published. Required fields are marked *

error: Content is protected !!