ಭದ್ರಾವತಿಯಲ್ಲಿ ಬಿಗುವಿನ ವಾತಾವರಣ, ಅಂಗಡಿ ಮೇಲೆ ಕಲ್ಲು ತೂರಾಟ

police

 

 

ಸುದ್ದಿ ಕಣಜ.ಕಾಂ | TALUK | PROTEST
ಭದ್ರಾವತಿ: ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ನಗರದ ರಂಗಪ್ಪ ವೃತ್ತದಲ್ಲಿ ಬಜರಂಗ ದಳ ಕಾರ್ಯಕರ್ತರು ಭಾನುವಾರ ನಡೆಸಿದ ಪ್ರತಿಭಟನೆ ವೇಳೆ ಗಲಾಟೆ ನಡೆದು ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

READ | ಮೇಕೇರಿಯಲ್ಲಿ ಲಾರಿ- ಬಸ್ ಡಿಕ್ಕಿ, 20ಕ್ಕೂ ಅಧಿಕ ಮಂದಿಗೆ ಗಾಯ

ಪ್ರತಿಭಟನೆ ವೇಳೆ ಅನ್ಯಕೋಮಿನ ಯುವಕರು ಪ್ರತಿಭಟನಾಕಾರರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ರಂಗಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಕೃತಿಯನ್ನು ದಹಿಸಲಾಗಿತ್ತು.
ಬಟ್ಟೆ ಅಂಗಡಿಯೊಂದರ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಗಾಜುಗಳು ಪುಡಿ ಪುಡಿಯಾಗಿವೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!