ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಚನ್ನಗಿರಿ ರಸ್ತೆಯ ಎಸ್.ಎಸ್.ಜ್ಯುವೆಲರ್ಸ್ ಮಳಿಗೆಯಲ್ಲಿ ಕಳ್ಳತನ ಮಾಡಿದ್ದ ನೇಪಾಳ ಮೂಲದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಭಾನುವಾರ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಅವರನ್ನು ತಡೆದು ಪೊಲೀಸರು ವಿಚಾರಿಸಿದ್ದಾರೆ. ಅವರ ಬಳಿ 35 ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ಅಂದಾಜು 1.25 ಕೆಜಿ ಚಿನ್ನದ ಆಭರಣ, 50 ಕೆಜಿ ಬೆಳ್ಳಿಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಭದ್ರಾವತಿಯ ಹಳೆನಗರದ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.