ಸುದ್ದಿ ಕಣಜ.ಕಾಂ | DISTRICT | RAIN FALL
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ನಿರಂತರಮಳೆ ಸುರಿಯುತಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಇದರ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ.
ಜುಲೈ 11 ರಿಂದ 15ರ ವರೆಗೆ ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಆತಂಕ ಶುರುವಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮಂಗಳವಾರ ವರ್ಷಧಾರೆಯ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. 115 ಎಂಎಂನಿಂದ 204 ಎಂಎಂವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ನಂತರ ಅಬ್ಬರ ಕಡಿಮೆಯಾಗಲಿದ್ದು, ಜು. 13 ರಿಂದ 15 ರವರೆಗೆ 64 ಎಎಂನಿಂದ 115 ಎಂಎಂ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
READ | ಶಿವಮೊಗ್ಗದಲ್ಲಿ ಭಾರೀ ಮಳೆಗೆ 129 ಮನೆಗಳಿಗೆ ಹಾನಿ