ಭದ್ರಾವತಿಯಲ್ಲಿ‌ ತಮ್ಮನ ಮೇಲೆ‌ ಗುಂಡು ಹಾರಿಸಿದ ಅಣ್ಣ!

 

ಸುದ್ದಿ ಕಣಜ.ಕಾಂ | DISTRICT | CRIME NEWS
ಭದ್ರಾವತಿ: ಕ್ಷುಲ್ಲಕ ಕಾರಣಕ್ಕೆ ಅಣ್ಣನೇ ತನ್ನ‌ ಸ್ವಂತ ತಮ್ಮನ ಮೇಲೆ ನಾಡಬಂದೂಕಿನಿಂದ ಗುಂಡು ಹಾರಿಸಿದ್ದು, ತಮ್ಮನ ತೊಡೆ ಭಾಗಕ್ಕೆ ಗುಂಡೇಟು ಬಿದ್ದಿದೆ. ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ತಾಲೂಕಿನ ಸಿದ್ದಮಟ್ಟಿಯ ಬ್ಲಾಕ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುರುಗೇಶ್(35) ಗಾಯಗೊಂಡಾತ. ಜಮೀನಿಗೆ ಹೋಗುವ ಮಾರ್ಗದಲ್ಲಿ ಹೂವಿನ ಗಿಡಗಳನ್ನು ನೆಟ್ಟಿದ್ದಕ್ಕೆ ಸಹೋದರ ಮುನಿಸ್ವಾಮಿ ಅವರ ಪತ್ನಿ ಹಾಗೂ ಸಂಬಂಧಿಕರಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ. ಇದನ್ನು ಕೇಳಿಸಿಕೊಂಡ ಮುನಿಸ್ವಾಮಿ ಮನೆಯಲ್ಲಿದ್ದ ನಾಡಬಂದೂಕಿನಿಂದ ಸಹೋದರನ ಮೇಲೆಯೇ ಗುಂಡು ಹಾರಿಸಿದ್ದಾನೆ. ಬಲಿಗಾಲಿನ ತೊಡೆ ಭಾಗಕ್ಕೆ ಗುಂಡೇಟಾಗಿದ್ದು, ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚುವರಿ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.