Har Ghar Tiranga | ಶಿವಮೊಗ್ಗದಲ್ಲಿ ಹೇಗೆ ನಡೆದಿದೆ ತಯಾರಿ, ಜಿಲ್ಲಾಡಳಿತ ನೀಡಿರುವ ಸೂಚನೆಗಳೇನು?

 

ಸುದ್ದಿ ಕಣಜ.ಕಾಂ | DISTRICT | ADC MEETING
ಶಿವಮೊಗ್ಗ: ಹರ್ ಘರ್ ತಿರಂಗಾ (Har Ghar Tiranga) ಅಭಿಯಾನ ಯಶಸ್ವಿಗೆ ಜಿಲ್ಲಾಡಳಿತ ಎಲ್ಲ ಪೂರ್ವ ತಯಾರಿಗಳನ್ನು‌ ಮಾಡಿಕೊಂಡಿದೆ. ಆಗಸ್ಟ್ 13ರಿಂದ 15ರ ವರೆಗೆ ಮನೆಗಳ ಮೇಲೆ‌ ತ್ರಿವರ್ಣ ಧ್ವಜ‌ (tricolor flag) ಹಾರಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಜತೆಗೆ ‌ಕೆಲವು ಸೂಚನೆಗಳನ್ನು‌ ನೀಡಲಾಗಿದೆ.

READ | ಶಿವಮೊಗ್ಗದ JNNCEನಲ್ಲಿ‌ ಹೊಸ ಕೋರ್ಸ್ ಆರಂಭ, ಯುವಕರಿಗೆ ಉತ್ತಮ ಅವಕಾಶ

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ(Dr.Nagendra Honnali), ಅಭಿಯಾನವನ್ನು ಯಶಸ್ವಿಗೊಳಿಸಲು ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ರಾಷ್ಟ್ರಧ್ವಜ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಷ್ಟ್ರಧ್ವಜ ಪೂರೈಕೆ ಮಾಡಲಾಗಿದೆ. ಧ್ವಜ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಅಭಿಯಾನದಲ್ಲಿ ಭಾಗವಹಿಸಿ, ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ತಿಳಿಸಿದರು.
ಯಾವ ಬಗೆಯ ಧ್ವಜ ಬಳಸಬೇಕು?
ಎಲ್ಲರೂ ಅಭಿಯಾನಕ್ಕೆ ಸಹರಿಸಬೇಕು ಎಂದು‌ ಕೋರಲಾಗಿದೆ. ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ದೇಶಾದ್ಯಂತ ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ. ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕು. ಸಾರ್ವಜನಿಕರು ಕೈಮಗ್ಗ ಅಥವಾ ವಿದ್ಯುತ್ ಮಗ್ಗದಿಂದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ರೇಷ್ಮೆ ಅಥವಾ ಖಾದಿಯಲ್ಲಿ ತಯಾರಿಸಿರುವ ರಾಷ್ಟ್ರ ಧ್ವಜವನ್ನು ಬಳಸಬಹುದಾಗಿದೆ ಎಂದರು.

ಎಲ್ಲ ಮನೆಗಳ‌ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವಾಗ ಎಲ್ಲರೂ‌‌ ಎಚ್ಚರ ವಹಿಸಬೇಕು. ಯಾವುದೇ ರೀತಿಯಲ್ಲಿ ಅಗೌರವವಾಗದಂತೆ ನಿಗಾ ವಹಿಸಬೇಕು.
| ಡಾ.ನಾಗೇಂದ್ರ ಹೊನ್ನಳ್ಳಿ, ಎಡಿಸಿ

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು. ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಸೂಕ್ತ ಶಾಮಿಯಾನ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ವೃತ್ತಗಳಲ್ಲಿ, ಎಲ್ಲ ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು. ಸಾರ್ವಜನಿಕರು ಸಹ ಸ್ವಯಂಪ್ರೇರಣೆಯಿಂದ ತಮ್ಮ ಕಟ್ಟಡಗಳಿಗೆ ದೀಪಾಲಂಕಾರ ಮಾಡಬೇಕು. ಸಂಜೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ತಾಲೂಕುಗಳಲ್ಲಿಯೂ ಸಹ ಆಯಾ ತಹಸೀಲ್ದಾರರು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ತಾಲೂಕಾಡಳಿತ ವತಿಯಿಂದ  ಮಾರ್ಗಸೂಚಿಗಳನ್ವಯ ಅರ್ಥಪೂರ್ಣವಾಗಿ ಆಯೋಜಿಸುವಂತೆ ಅವರು ಸೂಚಿಸಿದರು.

ಡಿಸಿ ಕಚೇರಿಯಲ್ಲಿ ಇ-ಆಫೀಸ್ ವ್ಯವಸ್ಥೆ, ‘ಕಂದಾಯ’ ನಿರ್ವಹಣೆಯಲ್ಲಿ ಶಿವಮೊಗ್ಗ ರಾಜ್ಯಕ್ಕೆ ಫಸ್ಟ್, ಜನರ ಅಲೆದಾಟಕ್ಕೆ ಬೀಳಲಿದೆ ಬ್ರೇಕ್

Leave a Reply

Your email address will not be published.